ದಟ್ಟ ಮಂಜು ಕವಿದ ಹಿನ್ನೆಲೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ.
ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ಕಾರು ಅಪಘಾತ ವರದಿಯಾಗಿದೆ. ಈ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರ ಐದು ಜನರು ಗಾಯಗೊಂಡಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪಘಾತದಲ್ಲಿ ಎರಡು ವಾಹನಗಳು ಜಖಂಗೊಂಡಿವೆ. ಧರ್ಮರಾಮ್ ಗಿಲಾದ ಉಪ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ಗರ್ಗ್ ಅವರ ಪ್ರಕಾರ, “ಹೆದ್ದಾರಿಯಲ್ಲಿ ಎರಡು ವಾಹನಗಳ ನಡುವೆ ಡಿಕ್ಕಿ ಹೊಡೆದಿರುವ ಬಗ್ಗೆ ನಮಗೆ ಮಾಹಿತಿ ಬಂದಿದೆ… ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದಿದ್ದಾರೆ.
ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಐದು ಜನರು ಗಾಯಗೊಂಡಿದ್ದಾರೆ. ಮೃತರ ಗುರುತನ್ನು ಕಂಡುಹಿಡಿಯಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದರು, ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಟ್ವೀಟ್ ಮಾಡಿದ್ದಾರೆ.