HomeKarnatakaBIG NEWS: ಮಾಜಿ ಸಿಎಂ ಕುಮಾರಸ್ವಾಮಿ ಭೇಟಿಯಾದ ಮಾಜಿ ಸಚಿವ ಸುಧಾಕರ್

BIG NEWS: ಮಾಜಿ ಸಿಎಂ ಕುಮಾರಸ್ವಾಮಿ ಭೇಟಿಯಾದ ಮಾಜಿ ಸಚಿವ ಸುಧಾಕರ್

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಚುವಟಿಕೆಗಳು ಗರಿಗೆದರಿದ್ದು, ಟಿಕೆಟ್ ಆಕಾಂಕ್ಷಿಗಳ ಕಸರತ್ತು ಜೋರಾಗಿದೆ. ಮಾಜಿ ಸಚಿವ ಡಾ.ಸುಧಾಕರ್ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಉಭಯ ಪಕ್ಷಗಳ ನಡುವೆ ಸೀಟು ಹಂಚಿಕೆ ಲೆಕ್ಕಾಚಾರ ಆರಂಭವಾಗಿದೆ. ಈ ನಡುವೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿಯಾಗಿ ಚರ್ಚಿಸಿದ್ದರು. ಇದರ ಬೆನ್ನಲ್ಲೇ ಇದೀಗ ಬಿಡದಿ ತೋಟದ ಮನೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಮಾಜಿ ಸಚಿವ ಸುಧಾಕರ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಸುಧಾಕರ್ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಜೆಡಿಎಸ್ ಸಂಭಾವ್ಯ ಕ್ಷೇತ್ರಗಳಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರ ಕೂಡ ಇರುವುದರಿಂದ ಹೆಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular