HomeIndiaಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: 3 ಕಾರ್ಮಿಕರು ಸಾವು, 5 ಮಂದಿ ಗಾಯ

ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: 3 ಕಾರ್ಮಿಕರು ಸಾವು, 5 ಮಂದಿ ಗಾಯ

ಉತ್ತರ ಪ್ರದೇಶ ಸೀತಾಪುರದ ಸಕ್ಕರೆ ಕಾರ್ಖಾನೆಯಲ್ಲಿ ಸೋಮವಾರ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ.

ರಾಮ್‌ ಕೋಟ್ ಪೊಲೀಸ್ ಠಾಣೆ ವ್ಯಾಪ್ತಿಯ ಜವಾಹರಪುರ ಸಕ್ಕರೆ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ನಿರ್ವಹಣೆ ಕಾರ್ಯದ ವೇಳೆ ಬಾಯ್ಲರ್‌ನಲ್ಲಿ ಸ್ಫೋಟ ಸಂಭವಿಸಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಸರ್ಕಲ್ ಆಫೀಸರ್(ನಗರ) ಅಮನ್ ಸಿಂಗ್ ತಿಳಿಸಿದ್ದಾರೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮೃತರನ್ನು ಇನ್ನೂ ಗುರುತಿಸಲಾಗಿಲ್ಲ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನೂ ಅಭಿವೃದ್ಧಿ ಹಂತದಲ್ಲಿದ್ದ ಧಾನ್ಯ ಆಧಾರಿತ ಬಾಯ್ಲರ್ ಸ್ಫೋಟಗೊಂಡಿದೆ. ಪರಿಣಾಮ ಮೂವರು ಗಿರಣಿ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಎಸ್‌ಡಿಎಂ, ಎಡಿಎಂ, ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಯಾರಿಗೂ ಗಾಯಗಳಾಗಿರುವ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೆಚ್ಚುವರಿ ಎಸ್ಪಿ(ಉತ್ತರ) ಪ್ರಕಾಶ್ ಕುಮಾರ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನಾ ಸ್ಥಳಕ್ಕೆ ಆಗಮಿಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಸೀತಾಪುರ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular