![](https://kannadadunia.com/wp-content/uploads/2019/03/siddu-cm-hasan-cong.jpg)
ಹಾವೇರಿ : ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೂ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ, ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಎಸ್.ಐ.ಟಿ ನಲ್ಲಿರುವವವರೂ ಪೊಲೀಸರೇ. ಪ್ರಕರಣದ ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವರದಿ ಬಂದ ನಂತರ ತೀರ್ಮಾನಿಸಲಾಗುವುದು ಎಂದರು.
ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆ ಮೇಲೆ ದೌರ್ಜನ್ಯ ನಡೆದಾಗ ಗೃಹ ಸಚಿವರು ಭೇಟಿ ನೀಡಿದ್ದರು. ಭೇಟಿ ನೀಡುವಂತೆ ನಾನೇ ಸೂಚನೆ ನೀಡಿದ್ದೆ. ಇಲ್ಲಿ ಗೃಹ ಸಚಿವರು ಇರಲಿಲ್ಲ. ಕೇಂದ್ರದ ಮಾಜಿ ಸಚಿವ ಶಿವಣ್ಣ ಭೇಟಿ ನೀಡಿದ್ದಾರೆ. ಸಂತ್ರಸ್ತೆಯನ್ನು ಭೇಟಿ ಮಾಡಿ ಸಾಂತ್ವನ ಹೇಳುವುದು ಒಂದು ಭಾಗವಾದರೆ, ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳುವುದು ಮತ್ತೊಂದು ಭಾಗ. ಎರಡನ್ನೂ ಮಾಡಿದ್ದೇವೆ ಎಂದು ಹೇಳಿದ್ದಾರೆ.