![](https://kannadadunia.com/wp-content/uploads/2023/12/Cm-siddaramaiah-4.jpg)
ಹಾವೇರಿ : 2024-25 ನೇ ಸಾಲಿನ ರಾಜ್ಯ ಬಜೆಟ್ ಅನ್ನು ಫೆಬ್ರವರಿ ತಿಂಗಳಲ್ಲೇ ಮಂಡಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ ಮೊದಲ ವಾರದೊಳಗೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವುದರಿಂದ ಫೆಬ್ರವರಿ ತಿಂಗಳಲ್ಲಿಯೇ ಬಜೆಟ್ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.
ರೈತರರಿಗೆ ಪರಿಹಾರ ನೀಡಿಲ್ಲವೆಂದು ಪ್ರತಿಭಟನೆ ಮಾಡುತ್ತಿದ್ದಾರೆ. ರೈತರಿಗೆ 2,000 ರೂ.ಗಳ ತಾತ್ಕಾಲಿಕ ಪರಿಹಾರವನ್ನು ನೀಡುತ್ತಿದ್ದು ಕೇಂದ್ರ ಸರ್ಕಾರದಿಂದ ಎನ್.ಡಿ.ಆರ್.ಎಫ್ ನಡಿ ಬರ ಪರಿಹಾರ ಬಂದ ನಂತರ ಪುನಃ ನಿಯಮಾವಳಿಗಳ ಪ್ರಕಾರ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
ಅನಂತಕುಮಾರ್ ಹೆಗಡೆಯವರು ಮುಖ್ಯಮಂತ್ರಿ ಹುದ್ದೆಯಲ್ಲಿರುವ ವ್ಯಕ್ತಿಗೆ ಏಕವಚನದಲ್ಲಿ ಮಾತನಾಡುವುದನ್ನು ಸಮರ್ಥಿಸಿಕೊಂಡಿದ್ದಾರೆ. ಹೆಗಡೆ ಅವರು ಇವತ್ತಿನವರೆಗೆ ನಾಪತ್ತೆಯಾಗಿದ್ದರು. ಚುನಾವಣೆ ಹತ್ತಿರ ಬಂದಂತೆ ಕಾಣಿಸಿಕೊಂಡು ಹೇಳಿಕೆ ನೀಡಿದ್ದಾರೆ. ಸಂಸದರಾಗಿ, ಮಾಜಿ ಮಂತ್ರಿಯಾಗಿ ಕ್ಷೇತ್ರಕ್ಕೆ ಏನಾದರೂ ಮಾಡಿದ್ದಾರೆಯೇ? ಇಂದಿನವರೆಗೆ ಬಡವರ ಸಮಸ್ಯೆ ಕೇಳಿದ್ದಾರೆಯೇ? ಸಂಸ್ಕೃತಿ ಎಂದರೆ ಮನುಷ್ಯತ್ವ. ಮೊದಲು ಮನುಷ್ಯ ತ್ವ ಇರಬೇಕು ಎಂದರು.