ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಕೆಎಸ್ ಆರ್ ಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬೈಕ್ ಗೆ ಬಸ್ ಡಿಕ್ಕಿಯಾಗಿ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದ ಮುಂಭಾಗ ತಡರಾತ್ರಿ 1 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಡೆಲಿವರಿ ಬಾಯ್ ಬಸವರಾಜ್ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೈಸೂರು ರಸ್ತೆ ಕಡೆಗೆ ಹೋಗುತ್ತಿದ್ದ ಬಸವರಾಜ್ ನನ್ನು ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಬಸವರಾಜ್ ನನ್ನು ಬಸ್ 20 ಮೀಟರ್ ದೂರದವರೆಗೆ ಎಳೆದುಕೊಂಡು ಹೋಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸದ್ಯ ಬಸವರಾಜ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ.