ನವದೆಹಲಿ : ಭಾರತೀಯ ಸೇನೆಗೆ ಸೇರಬಯಸುವವರಿಗೆ ಸಿಹಿಸುದ್ದಿ, ಭಾರತೀಯ ವಾಯುಪಡೆಗೆ ಅಗ್ನಿವೀರರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.
ಐಎಎಫ್ ಅಗ್ನಿವೀರ್ ವಾಯು ನೇಮಕಾತಿ 2024 ನೋಂದಣಿಯು ಜನವರಿ 17ರ ಇಂದಿನಿಂದ ಪ್ರಾರಂಭವಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಹತೆ, ವಯಸ್ಸಿನ ಮಿತಿ, ನೇಮಕಾತಿ ವಿವರಗಳು, ಅರ್ಜಿಶುಲ್ಕ, ಪೋಸ್ಟ್‌ಗಳ ಸಂಖ್ಯೆ ಮತ್ತು ಇತರ ವಿವರಗಳನ್ನು ಅಧಿಕೃತ ವೈಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು.
2024 ಫೆಬ್ರವರಿ 6ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು agnipathvayu.cdac.in ವೆಬ್ ಸೈಟ್ ನಲ್ಲಿ ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಹ ಅಭ್ಯರ್ಥಿಗಳು 550 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಅಭ್ಯರ್ಥಿಗಳಿಗೆ ಭಾರತೀಯ ವಾಯುಪಡೆಯು ಮಾರ್ಚ್ 17ರಿಂದ ಪರೀಕ್ಷೆ ನಡೆಸುತ್ತದೆ. ಸೇವಾ ಅಗತ್ಯಕ್ಕೆ ಅನುಗುಣವಾಗಿ ಮಹಿಳಾ ಅಭ್ಯರ್ಥಿಗಳ ಸಂಖ್ಯೆ ಮತ್ತು ಉದ್ಯೋಗಾವಕಾಶವನ್ನು ನಿರ್ಧರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.