HomeAgricultureಅಕ್ರಮವಾಗಿ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಬಿಗ್ ಶಾಕ್ : 1.1 ಲಕ್ಷ ಎಕರೆ ಜಮೀನು...

ಅಕ್ರಮವಾಗಿ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಬಿಗ್ ಶಾಕ್ : 1.1 ಲಕ್ಷ ಎಕರೆ ಜಮೀನು ವಶಕ್ಕೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಅಕ್ರಮವಾಗಿ ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ 1.1 ಲಕ್ಷ ಎಕರೆ ಜಮೀನು ವಶಕ್ಕೆ ನಿರ್ಧರಿಸಿದೆ.

ರಾಜ್ಯದಲ್ಲಿ ಅಕ್ರಮವಾಗಿ ಒತ್ತುವರಿಯಾಗಿರುವ ಸರ್ಕಾರಿ ಜಮೀನು ವಾಪಸ್‌ ವಶಪಡಿಸಿಕೊಳ್ಳಲು ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಕರ್ನಾಟಕ ಪಬ್ಲಿಕ್‌ ಲ್ಯಾಂಡ್ಸ್‌ ಕಾರ್ಪೋರೇಷನ್‌ ಲಿಮಿಟೆಡ್‌ (KPLCL) ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಡೆಡ್‌ ಲೈನ್‌ ನೀಡಿದೆ.

ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಜಮೀನುಗಳನ್ನು ಜನವರಿ ೩೧ರೊಳಗೆ ಗುರುತಿಸಿ, ಖಾಲಿ ಮಾಡಿಸಿ ವಶಕ್ಕೆ ಪಡೆದುಕೊಳ್ಳಬೇಕು ಎಂದು ಕರ್ನಾಟಕ ಪಬ್ಲಿಕ್‌ ಲ್ಯಾಂಡ್ಸ್‌ ಕಾರ್ಪೋರೇಷನ್‌ ಲಿಮಿಟೆಡ್‌ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular