BREAKING NEWS: ಡಿವೈಡರ್ ಗೆ ಬೈಕ್ ಡಿಕ್ಕಿ; ತಂದೆ-ಮಗು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ಸಾಲು ಸಾಲು ಅಪಘಾತ, ಅಗ್ನಿ ಅವಘಡ ಘಟನೆನಗಳು ಸಂಭವಿಸುತ್ತಿದೆ. ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ನಡೆದಿದೆ.

ಅಡಕಮಾರನಹಳ್ಳಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಬೈಕ್ ಡಿವೈಡರ್ ಗೆ ಡಿಕ್ಕಿಹೊಡೆದ ಪರಿಣಾಮ ತಂದೆ-ಮಗಳು ಹಾಗೂ ಪತ್ನಿ ಮೂವರು ಕೆಳಗೆ ಬಿದ್ದಿದ್ದಾರೆ. ತಂದೆ ಹಾಗೂ ಮಗಳಿಗೆ ತಲೆಗೆ ತೀವ್ರವಾದ ಪೆಟ್ಟಾಗಿದ್ದು, ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಿಕ್ಕಪೇಟೆಯ ಅಮಿತ್ (32) ಹಾಗೂ 5 ವರ್ಷದ ಮಗಳು ಅನ್ವಿತ ಮೃತರು. ಅಮಿತ್ ಪತ್ನಿ ಕುಸುಮಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read