ಶಿರಸಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಪದ ಬಳಕೆ ವಿಚಾರವಾಗಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಸಂಸದ ಅನಂತ ಕುಮಾರ್ ಹೆಗಡೆ, ಇದು ನನ್ನ ವೈಯಕ್ತಿಕ ಹೇಳಿಕೆ ಎಂದು ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಅನಂತ ಕುಮಾರ್ ಹೆಗಡೆ, ಸಿಎಂ ವಿರುದ್ಧ ವಾಗ್ದಾಳಿ ವಿಚಾರವಾಗಿ ಇದು ನನ್ನ ವೈಯಕ್ತಿಕ ಹೇಳಿಕೆ, ಪಕ್ಷದ ಹೇಳಿಕೆಯಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿರುವುದು ಸರಿ ಇದೆ ಎಂದಿದ್ದಾರೆ.
ನನ್ನ ಹೇಳಿಕೆ ನನ್ನ ಸಂಸ್ಕೃತಿಯನ್ನು ತೋರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಂಸಕೃತಿ ಬಗ್ಗೆ ಸಿಎಂ ನನ್ನ ಎದುರು ಬಂದು ಹೇಳಲಿ. ಎಲ್ಲೋ ಕುಳಿತು ಮಾತನಾಡುವುದಲ್ಲ. ಇದೆಲ್ಲದರ ಬಗ್ಗೆ ನಾವು ಕುಳಿತು ಚರ್ಚೆ ಮಾಡೋಣ. ಚರ್ಚೆಗೆ ಬನ್ನಿ ಎಂದು ಸವಾಲು ಹಾಕಿದರು.
ಇದೇ ವೇಳೆ ಅನಂತಕುಮಾರ್ ಹೆಗಡೆ ಆರೋಗ್ಯದ ಬಗ್ಗೆ ಗಮನ ಕೊಡಲಿ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೂ ಟಾಂಗ್ ನೀಡಿರುವ ಸಂಸದರು, ನನ್ನ ಆರೋಗ್ಯ ಚನ್ನಾಗಿಯೇ ಇದೆ. ಯಾವುದೇ ಸಂಶಯ ಬೇಡ ಎಂದು ಹೇಳಿದ್ದಾರೆ.