ವಿಜಯನಗರ : ಮದುವೆಯಾಗಲು ಕನ್ಯೆ ಸಿಗಲಿಲ್ಲ ಎಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಿ.ಮಧುಸೂಧನ್ (26) ಎಂದು ಗುರುತಿಸಲಾಗಿದೆ. ಮದುವೆಯಾಗಲು ಕನ್ಯೆ ಕೊಡಲಿಲ್ಲ, ಈತ ಇಷ್ಟಪಟ್ಟಿದ್ದ ಯುವತಿಯ ತಂದೆ ಮದುವೆಗೆ ಒಪ್ಪಿಗೆ ಕೊಡಲಿಲ್ಲ, ಇನ್ನು ಮುಂದೆ ನನಗೆ ಮದುವೆ ಆಗಲ್ಲ ಎಂದು ಮನನೊಂದ ಯುವಕ ವಿಷ ಸೇವಿಸಿದ್ದಾನೆ. ಕೂಡಲೇ ಆತನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ. ಗುಡೇಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.