ಮಡಿಕೇರಿ : ಮಡಿಕೇರಿ ಲಾಡ್ಜ್ ನಲ್ಲಿ ಪ್ರವಾಸಿಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಕಳೆದ 3 ದಿನದ ಹಿಂದೆ ಮಡಿಕೇರಿ ಪ್ರವಾಸಕ್ಕೆ ಬಂದಿದ್ದ ಸಂದೇಶ್ ಎಂಬಾತ ಮಡಿಕೇರಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಲ್ಲಿ ಐಟಿ ಕೆಲಸ ಮಾಡುತ್ತಿದ್ದ ಸಂದೇಶ್ ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.