HomeKarnatakaರಾಮ ಮಂದಿರ ಮಂತ್ರಾಕ್ಷತೆ ವಿತರಣೆ ಮಾಡುತ್ತಿದ್ದ ಸಂಚಾಲಕನ ಮೇಲೆ ಹಲ್ಲೆ

ರಾಮ ಮಂದಿರ ಮಂತ್ರಾಕ್ಷತೆ ವಿತರಣೆ ಮಾಡುತ್ತಿದ್ದ ಸಂಚಾಲಕನ ಮೇಲೆ ಹಲ್ಲೆ

ಮಂಗಳೂರು: ರಾಮ ಮಂದಿರ ಮಂತ್ರಾಕ್ಷತೆ ವಿತರಣೆ ಮಾಡುತ್ತಿದ್ದ ಸಂಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಂಡೂರಿನಲ್ಲಿ ನಡೆದಿದೆ.

ಸಂತೋಷ್ ಹಲ್ಲೆಗೊಳಗಾದ ಸಂಚಾಲಕ. ಸಂತೋಷ್ ಮುಂಡೂರಿನಲ್ಲಿ ಮಂತ್ರಾಕ್ಷತೆ ಹಂಚುವ ಜವಾಬ್ದಾರಿ ವಹಿಸಿಕೊಂಡಿದ್ದರು ಎನ್ನಲಾಗಿದೆ. ಮನೆ ಮನೆಗೆ ಮಂತ್ರಾಕ್ಷತೆ ವಿತರಣೆ ಮಾಡುತ್ತಿದ್ದಾಗ ಸ್ಥಳೀಯ ನಿವಾಸಿ ಧನಂಜಯ್ ಹಾಗೂ ಆತನ ಸಹಚರರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗಲಾಟೆ ವೇಳೆ ತಡೆಯಲು ಬಂದ ಸಂತೋಷ್ ತಾಯಿ ಮೇಲೂ ಹಲ್ಲೆ ನಡೆಸಿದ್ದು, ಗಾಯಾಳುಗಳಿಬ್ಬರೂ ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ದಾಖಲಿಸಿಕೊಂಡಿರುವ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular