ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ನಿಯೋಗವು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಏಳನೇ ವೇತನ ಆಯೋಗ ರಚನೆಯಾಗಿ ೧೨ ತಿಂಗಳಾಗಿವೆ. ಮಾರ್ಚ್ ವರೆಗೆ ಕಾಲಾವಧಿ ವಿಸ್ತರಣೆಯಾಗಿದ್ದು, ಚುನಾವಣೆ ನೀತಿ ಸಂಹಿತೆ ಘೋಷಣೆಯಾಗುವ ಮೋದಲೇ ವೇತನ ಪರಿಷ್ಕರಣೆ ಮಾಡಿ ಘೋಷಣೆ ಮಾಡುವಂತೆ ಮನವಿ ಸಲ್ಲಿಸಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.