![](https://kannadadunia.com/wp-content/uploads/2023/11/janata.png)
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 8 ರಂದು ಜನತಾ ದರ್ಶನ ಕಾರ್ಯಕ್ರಮವನ್ನು ನಡೆಸಲು ಉದ್ದೇಶಿಸಿದ್ದಾರೆ.
ಜನರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡುವ ಜನತಾ ದರ್ಶನವನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಸಲಾಗಿತ್ತು. ಇದೀಗ ಎರಡನೇ ಜನತಾ ದರ್ಶನವನ್ನು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಬಳಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಜನತಾ ದರ್ಶನದ ಸ್ಥಳ ಬದಲಾವಣೆ ಬಗ್ಗೆ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆದಿದೆ. ಕೃಷ್ಣಾ ಆವರಣ ಚಿಕ್ಕಿದಾಗಿದ್ದು, ಸಾವಿರಾರು ಜನ ಸಮಸ್ಯೆಯನ್ನು ಮುಖ್ಯಮಂತ್ರಿ ಬಳಿ ಹೇಳಿಕೊಳ್ಳಲು ಜಾಗ ಸಾಕುಗುತ್ತಿಲ್ಲ. ಹೀಗಾಗಿ ವಿಧಾನಸೌಧದ ಮೆಟ್ಟಿಲ ಬಳಿ ಜನತಾ ದರ್ಶನ ನಡೆಸಲು ಸಿದ್ದತೆ ನಡೆಸಲಾಗಿದೆ ಎನ್ನಲಾಗಿದೆ.