![](https://kannadadunia.com/wp-content/uploads/2019/08/pregnant_1564485135.png)
ಬೆಂಗಳೂರು : ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಸುಮಾರು 49 ಸಾವಿರ ಬಾಲಕಿಯರು ಗರ್ಭಿಣಿಯರಾಗಿರುವ ಅಂಶ ಬೆಳಕಿಗೆ ಬಂದಿದೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ, ರಾಜ್ಯದಲ್ಲಿ ಮೂರು ವರ್ಷಗಳಲ್ಲಿ ಸುಮಾರು 49 ಸಾವಿರ ಬಾಲಕಿಯರು ಗರ್ಭಿಣಿಯರಾಗಿದ್ದು, 240 ಮಕ್ಕಳು ವಿವಿಧ ಕಾರಣಗಳಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಗರ್ಭಿಣಿ ಬಾಲಕಿಯರು ಮಗುವನ್ನು ಪಡೆದರೂ ಕಾನೂನು ಪ್ರಕಾರ 18 ವರ್ಷ ತುಂಬದಿದ್ದರೆ ಅಪರಾಧವಾಗುತ್ತದೆ. ಆಗ ಪೋಕ್ಸೋ ಕಾಯ್ದೆಯನ್ವಯ ಗರ್ಭದರಿಸಲು ಕಾರಣವಾದ ಅಪರಾಧಿ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಅಪರಾಧಿಗೆ ಕನಿಷ್ಠ 20 ವರ್ಷ ಜೈಲು ಶಿಕ್ಷೆಯಾಗಲಿದೆ ಎಂದು ಹೇಳಿದ್ದಾರೆ.