ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲದಲ್ಲಿ ಪುತ್ರ ಆತ್ಮಹತ್ಯೆ ಮಾಡಿಕೊಂಡ 13ನೇ ದಿನ ಆತನ ತಂದೆ ಕೂಡ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪೆರ್ಲ ನಿವಾಸಿ ಯೋಗೇಶ್ ಪೂಜಾರಿ(41) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಪುತ್ರ ಯಕ್ಷಿತ್(14) ಜನವರಿ 4ರಂದು ಮನೆ ಒಳಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಆತ್ಮಹತ್ಯೆಯಿಂದ ನೊಂದಿದ್ದ ಯೋಗೇಶ್ ಪೂಜಾರಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.