HomeKarnatakaBIG NEWS : ಜ.19 ರಂದು ರಾಜ್ಯಕ್ಕೆ 'ಪ್ರಧಾನಿ ಮೋದಿ' ಭೇಟಿ : ಹೀಗಿದೆ 'ನಮೋ'...

BIG NEWS : ಜ.19 ರಂದು ರಾಜ್ಯಕ್ಕೆ ‘ಪ್ರಧಾನಿ ಮೋದಿ’ ಭೇಟಿ : ಹೀಗಿದೆ ‘ನಮೋ’ ವೇಳಾಪಟ್ಟಿ

ಬೆಂಗಳೂರು : ಏರೋಸ್ಪೇಸ್ ಸಂಬಂಧಿತ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಜನವರಿ 19 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಅವರು ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ಜಾಗತಿಕ ಏರೋಸ್ಪೇಸ್ ದೈತ್ಯ ಬೋಯಿಂಗ್ ನ ಹೊಸ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ. ಮೋದಿ ಉದ್ಘಾಟಿಸಲಿರುವ ಹೊಸ ಕ್ಯಾಂಪಸ್ ಹೈಟೆಕ್ ಏರೋಸ್ಪೇಸ್ ಪಾರ್ಕ್ ಆಗಿದ್ದು, ಇದು ಯುಎಸ್ ಹೊರಗಿನ ಅತಿದೊಡ್ಡ ಬೋಯಿಂಗ್ ಸೌಲಭ್ಯವಾಗಿದೆ ಎಂದು ಹೇಳಲಾಗುತ್ತಿದೆ.

ದೆಹಲಿಯಿಂದ ಹೊರಡುವ ಮೋದಿ ನೇರವಾಗಿ ಕಲಬುರಗಿಗೆ ತೆರಳಲಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಿಂದ 9.40ಕ್ಕೆ ಹೆಲಿಕಾಫ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಹೋಗುತ್ತಾರೆ. ನಂತರ ಮಧ್ಯಾಹ್ನ 12.10ಕ್ಕೆ ಹೆಲಿಕಾಫ್ಟರ್ ಮೂಲಕ ಸೊಲ್ಲಾಪುರದಿಂದ ವಾಪಸ್ ಮಧ್ಯಾಹ್ನ 1 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಧ್ಯಾಹ್ನ 1.05 ಕ್ಕೆ ವಿಶೇಷ ವಿಮಾನದ ಮೂಲಕ ಕಲಬುರಗಿಯಿಂದ ಹೊರಡುವ ಮೋದಿ ಮಧ್ಯಾಹ್ನ 2.10ಕ್ಕೆ ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ತಲುಪುತ್ತಾರೆ. 2.15ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣನಿಂದ ರಸ್ತೆ ಮಾರ್ಗವಾಗಿ ದೇವನಹಳ್ಳಿ ತಾಲೂಕಿನ ಭಟ್ಟರ ಮಾರನಹಳ್ಳಿಗೆ ತೆರಳಲಿದ್ದಾರೆ.
2.45ಕ್ಕೆ ಭಟ್ಟರಮಾರನಹಳ್ಳಿಗೆ ಬಂದಿಳಿಯುವ ಪ್ರಧಾನಿ ಬಿಐಇಟಿಸಿ ಉದ್ಘಾಟನೆ ಮತ್ತು ಬೋಯಿಂಗ್ ಸುಕನ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಸಂಜೆ 4 ಗಂಟೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚೆನ್ನೈಗೆ ತೆರಳಲಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular