ಬೆಂಗಳೂರು : ಸುಳ್ಳು ಹೇಳುವುದು, ಜನರನ್ನು ವಂಚಿಸುವುದು, ಫೇಕ್ ಸುದ್ದಿಗಳನ್ನು ಸೃಷ್ಟಿಸುವುದು ಸಿಎಂ ಸಿದ್ದರಾಮಯ್ಯ ಅವರಿಗೆ ಚೆನ್ನಾಗಿಯೇ “ಸಿದ್ದಿ”ಸಿದೆ. ಸಿಎಂ ಸಿದ್ದರಾಮಯ್ಯ ಎಟಿಡಿಂಗ್ ಮಾಸ್ಟರ್ ಎಂದು ಬಿಜೆಪಿ ಟ್ವೀಟ್ ಮಾಡಿ ವಾಗ್ಧಾಳಿ ನಡೆಸಿದೆ.
ಈ ಬಗ್ಗೆ ಟ್ವೀಟ್ ಮಾಡಿದ ಬಿಜೆಪಿ ‘ ಸುಳ್ಳು ಹೇಳುವುದು, ಜನರನ್ನು ವಂಚಿಸುವುದು, ಫೇಕ್ ಸುದ್ದಿಗಳನ್ನು ಸೃಷ್ಟಿಸುವುದು ಸಿಎಂ ಸಿದ್ದರಾಮಯ್ಯ ಅವರಿಗೆ ಚೆನ್ನಾಗಿಯೇ “ಸಿದ್ದಿ”ಸಿದೆ. ನಕಲಿ ಸುದ್ದಿಗಳನ್ನು ರಚಿಸುತ್ತಾ ಕಾಲಹರಣ ಮಾಡುವ ಬದಲು ರಾಜ್ಯದ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಯೋಚಿಸಿದ್ದರೆ, ರೈತರು ಆತ್ಮಹತ್ಯೆಗೆ ಶರಣಾಗುತ್ತಿರಲಿಲ್ಲ, ಮಹಿಳೆಯರ ಮೇಲೆ ಹಲ್ಲೆ , ಮಾನಭಂಗಗಳು ನಡೆಯುತ್ತಿರಲಿಲ್ಲ. ಎಲ್ಲೆಂದರಲ್ಲಿ ಸದಾ ನಿದ್ದೆಗೆ ಜಾರುವುದು ನೀವು ಎಂಬುದು ಜಗತ್ತಿಗೆ ತಿಳಿದಿರುವ ವಿಷಯ. ದಿನಕ್ಕೆ 18 ಗಂಟೆ ಕೆಲಸ ಮಾಡುವ ಪ್ರಧಾನಿಯವರನ್ನು ಅವಹೇಳನ ಮಾಡಿದರೆ ಜನ ನಂಬುತ್ತಾರೆ ಎಂಬ ಭ್ರಮೆಯಿಂದ ಆದಷ್ಟು ಬೇಗ ಹೊರ ಬನ್ನಿ. ಸರ್ಕಾರವನ್ನು ಮೋದಿ ಮಾದರಿಯಲ್ಲಿ ಮುನ್ನಡೆಸಿ ಜನರ ಸಮಸ್ಯೆಯನ್ನು ಬಗೆಹರಿಸಿ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ.