ಕೋಲಾರ : ಕೋಲಾರ ಮುಳಬಾಗಿಲಿನಲ್ಲಿ ಶ್ರೀರಾಮನ ಫ್ಲೆಕ್ಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಾಂಸ ಕೊಚ್ಚುವ ಮಚ್ಚು ತೆಗೆದುಕೊಂಡು ಬಂದು ಫ್ಲೆಕ್ಸ್ ಹರಿದು ಹಾನಿಗೊಳಿಸಿದ್ದಾರೆ ಎಂದು ಹೇಳಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಸಿಸಿಟಿವಿ ಪರಿಶೀಲನೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಸಂಸದ ಮುನಿಸ್ವಾಮಿ ಸೇರಿ ಮತ್ತಿತರರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಜ.22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ, ಸಂಕ್ರಾಂತಿ ಹಿನ್ನೆಲೆ ಭಕ್ತರು ಮುಳಬಾಗಿಲಿನ ಗುಣಗಂಟೆ ಪಾಳ್ಯದಲ್ಲಿ ಶ್ರೀ ರಾಮನ ಕಟೌಟ್, ಫ್ಲೆಕ್ಸ್ ಅಳವಡಿಸಿದ್ದರು.