ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್ ನಕಲಿಯಲ್ಲಿ ಬಿಜೆಪಿ ಭಾಗಿಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ಶಾಸಕರು ಕೂಡ ಇದರಲ್ಲಿ ಭಾಗಿಯಾಗಿದ್ದಾರೆ. ನಮ್ಮ ರಾಜ್ಯದ ಸಂಪತ್ತು ಮೈಸೂರು ಸ್ಯಂಡಲ್ ಸೋಪ್ ಅದನ್ನು ನಕಲು ಮಾಡಿ ಮಾರಾಟ ಮಾಡಲು ಹೊರಟಿದ್ದಾರೆ. ನಕಲಿ ಮಾಡೋದ್ರಲ್ಲಿ ಬಿಜೆಪಿ ನಾಯಕರು ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ದುಡ್ಡು ಮಾಡಲು ಯಾವುದಕ್ಕೂ ಹೇಸುವುದಿಲ್ಲ. ನಕಲಿ ಸೋಪ್ ತಯಾರಿಕೆಯಲ್ಲಿ ಮಹಾವೀರ್ ಜೈನ್, ರಾಕೇಶ್ ಜೈನ್ ಭಾಗಿಯಾಗಿದ್ದಾರೆ ಇವರಿಬ್ಬರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಇಬ್ಬರೂ ಕೂಡ ಬಿಜೆಪಿ ಸಕ್ರಿಯ ನಯಕರು. ಬಿಜೆಪಿ ಶಾಸಕರ ಆಪ್ತರು ಎಂದು ಹೇಳಿದ್ದಾರೆ.
ಇಬ್ಬರು ಆರೋಪಿಗಳು ಯುಪಿ ಸಿಎಂ ಯೋಗಿ ಆದಿತ್ಯನಾಥ್, ಹಾಗೂ ಬಿಜೆಪಿಯ ರಾಜಾ ಸಿಂಗ್ ಜೊತೆ ನಿಕಟ ಸಂಪರ್ಕ ಹೊಂದಿದ್ದಾರೆ. ಇನ್ನು ಚಿತ್ತಾಪುರ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಹಾಗೂ ಮಾಜಿ ಶಾಸಕರೊಬ್ಬರ ಪುತ್ರನ ಜೊತೆಗೂ ಮಹಾವೀರ್ ಜೈನ್ ಸಂಪರ್ಕ ಹೊಂದಿದ್ದಾನೆ. ಒಟ್ಟಾರೆ ಪ್ರಕರಣದಲ್ಲಿ ಬಿಜೆಪಿ ನಾಯಕರೇ ಶಾಮೀಲಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.