ಬೆಂಗಳೂರು : 545 PSI ಹುದ್ದೆಗೆ ಜ.23 ರಂದು ಮರು ಪರೀಕ್ಷೆ ನಡೆಯಲಿದ್ದು, ಪ್ರವೇಶ ಪತ್ರ ಬಿಡುಗಡೆ ಆಗಿದೆ. ಅಭ್ಯರ್ಥಿಗಳು ಸ್ಕ್ಯಾನ್ ಮಾಡುವ ಮೂಲಕ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಬಹುದಾಗಿದೆ.
ಪೊಲೀಸ್ ಇನ್ಸ್ಪೆಕ್ಟರ್ (ಪಿಎಸ್ಐ) 545 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇದೇ 23ರಂದು ಮರು ಲಿಖಿತ ಪರೀಕ್ಷೆ ನಡೆಸಲಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ ಕಡ್ಡಾಯಗೊಳಿಸಿದೆ.
ಪರೀಕ್ಷೆಯ ಹಾಲ್ ಒಳಗೆ ಜೀನ್ಸ್ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧ ಸೇರಿದಂತೆ ಮತ್ತಿತರ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡಲಾಗಿದ್ದು, ಅವುಗಳ ವಿವರಗಳಿಗೆ ಕೆಇಎ ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ.