ಕೆ ಎಮ್ ರಾಘು ನಿರ್ದೇಶನದ ‘ಜಸ್ಟ್ ಪಾಸ್’ ಚಿತ್ರದ ‘ನೋಡಿದ ಕೂಡಲೇ’ ಎಂಬ ಮೆಲೋಡಿ ಹಾಡೊಂದನ್ನು ಇತ್ತೀಚಿಗಷ್ಟೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು.
ಇದೀಗ ಮತ್ತೊಂದು ವಿಡಿಯೋ ಹಾಡು ಜನವರಿ 18ಕ್ಕೆ ರಿಲೀಸ್ ಆಗಲಿದೆ. ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಈ ಹಾಡನ್ನು ಲಾಂಚ್ ಮಾಡಲಿದ್ದಾರೆ.
ಈ ಚಿತ್ರದಲ್ಲಿ ಶ್ರೀ ಸೇರಿದಂತೆ ಪ್ರಣತಿ, ಅರ್ಪಿತ, ಡುಮ್ಮ ವಿಶ್ವಾಸ್, ಗಗನ್, ನಿಖಿಲ್, ಚಂದುಶ್ರೀ, ಅಭಿ, ರಂಗಾಯಣ ರಘು ಹಾಗೂ ಸಾಧುಕೋಕಿಲ ತೆರೆ ಹಂಚಿಕೊಂಡಿದ್ದಾರೆ. ರಾಯ್ಸ್ ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ಕೆವಿ ಶಶಿಧರ್ ನಿರ್ಮಾಣ ಮಾಡಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ ಸಂಯೋಜನೆ ನೀಡಿದ್ದು, ಕೆ ಎಂ ಪ್ರಕಾಶ್ ಸಂಕಲನ, ಮತ್ತು ಸುಜಯ್ ಕುಮಾರ್ ಬಾವಿಕಟ್ಟೆ ಛಾಯಾಗ್ರಹಣವಿದೆ.