ಹಾವೇರಿ : ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ಬೆನ್ನಲ್ಲೇ ಮತ್ತೊಂದು ಕಿಡ್ನ್ಯಾಪ್ ಪ್ರಕರಣ ದಾಖಲಾಗಿತ್ತು. ಕಾಲೇಜಿಗೆ ಹೋಗಿದ್ದ ಮಗಳು ಮನೆಗೆ ಬಾರದ ಹಿನ್ನೆಲೆಯಲ್ಲಿ ಯುವತಿ ತಂದೆ ಹಾನಗಲ್ ಪೋಲೀಸ್ ಠಾಣೆಯಲ್ಲಿ ಕಿಡ್ನ್ಯಾಪ್ ಪ್ರಕರಣ ದಾಖಲು ಮಾಡಿದ್ದರು. ಇದೀಗ ಈ ಪ್ರಕರಣ ಸುಖಾಂತ್ಯ ಕಂಡಿದೆ.
ಪ್ರಕರಣ ದಾಖಲಿಸಿಕೊಂಡ ಹಾನಗಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಮುಸ್ಲಿಂ ಯುವಕ ಅಪ್ತಾಬ್ ಮತ್ತು ಹಿಂದೂ ಯುವತಿ ರೇಣುಕಾರನ್ನು ಗೋವಾದ ಮಡಗಾಂವ್ನಲ್ಲಿ ಪತ್ತೆ ಮಾಡಿದ್ದಾರೆ.
ನಾಪತ್ತೆಯಾಗಿದ್ದ ಹಿಂದೂ ಯುವತಿ ರೇಣುಕಾ ಕಲಾಲ್ ಗೋವಾದಲ್ಲಿ ಪತ್ತೆಯಾಗಿದ್ದಾಳೆ. ನಾಪತ್ತೆಯಾಗಿದ್ದ ಯುವತಿಯನ್ನ ಪತ್ತೆ ಹಾವೇರಿ ಜಿಲ್ಲಾ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಾಲೇಜಿಗೆ ಹೋಗಿದ್ದ ಮಗಳು ಮನೆಗೆ ಬಾರದ ಹಿನ್ನೆಲೆಯಲ್ಲಿ ಯುವತಿ ತಂದೆ ಹಾನಗಲ್ ಪೋಲೀಸ್ ಠಾಣೆಯಲ್ಲಿ ಕಿಡ್ನ್ಯಾಪ್ ಪ್ರಕರಣ ದಾಖಲು ಮಾಡಿದ್ದರು.
ಅನ್ಯಕೋಮಿನ ಯುವಕ ಅಫ್ತಾಬ್ ಎಂಬಾತ ನನ್ನ ಮಗಳನ್ನು ಕಿಡ್ನ್ಯಾಪ್ ಮಾಡಿದ್ದಾನೆ ಎಂದು ಯುವತಿಯ ತಂದೆ ಹಾನಗಲ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಿದ್ದರು. ಅಂತೆಯೇ ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರು ಯುವಕ-ಯುವತಿಯರನ್ನು ಪತ್ತೆ ಮಾಡಿದ್ದಾರೆ.