HomeKarnatakaದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ

ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ.

ತಾಯಿ ಸರಸ್ವತಿ(27), ಪುತ್ರಿಯರಾದ ದೀಪಿಕಾ(7), ರಿತಿಷಾ(4) ನಾಲ್ಕು ಮೃತಪಟ್ಟವರು ಎಂದು ಹೇಳಲಾಗಿದೆ. ಇಬ್ಬರೂ ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಸರಸ್ವತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2016ರಲ್ಲಿ ಸಾಂಗ್ಲಿಯ ನಿತಿನ್ ಕಿರವೆ ಜೊತೆ ಸರಸ್ವತಿ ಮದುವೆಯಾಗಿತ್ತು. ಗಂಡನ ಕಿರುಕುಳ ತಾಳಲಾರದೆ ಸರಸ್ವತಿ ತವರು ಮನೆ ಸೇರಿಕೊಂಡಿದ್ದರು. ಬಾವಿಯಿಂದ ಮೂವರ ಶವಗಳನ್ನು ಪೊಲೀಸರು ಹೊರ ತೆಗೆದಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular