HomeIndiaBREAKING NEWS: ರಾಮಮಂದಿರ 'ಪ್ರಾಣ ಪ್ರತಿಷ್ಠಾ' ದಿನ ಜ. 22 ರಂದು ಎಲ್ಲಾ ನ್ಯಾಯಾಲಯಗಳಿಗೆ ರಜೆ...

BREAKING NEWS: ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ದಿನ ಜ. 22 ರಂದು ಎಲ್ಲಾ ನ್ಯಾಯಾಲಯಗಳಿಗೆ ರಜೆ ನೀಡಲು ಸಿಜೆಐಗೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಪತ್ರ

ನವದೆಹಲಿ: ಅಯೋಧ್ಯೆಯಲ್ಲಿ ಭಗವಾನ್ ರಾಮನ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಸಂದರ್ಭದಲ್ಲಿ ಜನವರಿ 22 ರಂದು ಎಲ್ಲಾ ನ್ಯಾಯಾಲಯಗಳಿಗೆ ನ್ಯಾಯಾಂಗ ರಜೆ ನೀಡುವಂತೆ ಭಾರತೀಯ ಬಾರ್ ಕೌನ್ಸಿಲ್ ಅಧ್ಯಕ್ಷರು ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ.

ಬಾರ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು ರಜೆ ನೀಡಲು ಮನವಿ ಮಾಡಿದ್ದಾರೆ.

ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಸಮಾರಂಭ ಕಾರಣಕ್ಕಾಗಿ ಜನವರಿ 22 ರಂದು ಸುಪ್ರೀಂ ಕೋರ್ಟ್‌ಗೆ ರಜೆ ಘೋಷಿಸಲು ಔಪಚಾರಿಕ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಕೀಲ ಮಿಶ್ರಾ ಅವರು ತಮ್ಮ ಅರ್ಜಿಯಲ್ಲಿ ರಾಮಮಂದಿರ ಉದ್ಘಾಟನೆಯನ್ನು ರಾಷ್ಟ್ರದ ಪ್ರತಿಯೊಬ್ಬ ನಾಗರಿಕನ ರಾಷ್ಟ್ರೀಯ ಮತ್ತು ಸಾಂಸ್ಕೃತಿಕ ಪ್ರಾಮುಖ್ಯತೆಯ ಗೌರವದ ವಿಷಯ ಎಂದು ಉಲ್ಲೇಖಿಸಿದ್ದಾರೆ.

ನವೆಂಬರ್ 9, 2019 ರ ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು, ಜನವರಿ 22 ರ ಈ ಐತಿಹಾಸಿಕ ಘಟನೆ ನಡೆಯಲು ಕಾರಣವಾಗಿದೆ. ಹೀಗಾಗಿ ಎಲ್ಲಾ ನ್ಯಾಯಾಂಗ ಅಧಿಕಾರಿಗಳು ಮತ್ತು ವಕೀಲರಿಗೆ ಅವಕಾಶ ನೀಡಲು ಎಲ್ಲಾ ನ್ಯಾಯಾಲಯಗಳಿಗೆ ಪ್ರಾಣ ಪ್ರತಿಷ್ಠೆಯ ದಿನದಂದು ಅಧಿಕೃತ ರಜೆ ನೀಡಬೇಕೆಂದು ಕೋರಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular