HomeKarnatakaಶ್ರೀ ರಾಮನ ಬ್ಯಾನರ್ ಹರಿದ ಕಿಡಿಗೇಡಿಗಳು ವಶಕ್ಕೆ

ಶ್ರೀ ರಾಮನ ಬ್ಯಾನರ್ ಹರಿದ ಕಿಡಿಗೇಡಿಗಳು ವಶಕ್ಕೆ

ಕೋಲಾರ: ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳಿಂದ ಅಳವಡಿಸಿದ್ದ ಶ್ರೀ ರಾಮನ ಬ್ಯಾನರ್ ಅನ್ನು ದುಷ್ಕರ್ಮಿಗಳು ಹರಿದು ಹಾಕಿದ ಘಟನೆ ಮುಳಬಾಗಿಲು ಪಟ್ಟಣದ ಗುಣಿಗಂಟೆ ಪಾಳ್ಯದಲ್ಲಿ ನಡೆದಿದೆ.

ಮಂಗಳವಾರ ತಡರಾತ್ರಿ ಶ್ರೀ ರಾಮನ ಬ್ಯಾನರ್ ಮತ್ತು ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಬ್ಲೇಡ್ ನಿಂದ ಹರಿದು ಹಾಕಿದ್ದು, ಸಿಸಿಟಿವಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ. ಇದರಿಂದಾಗಿ ಕೆಲ ಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಇಬ್ಬರು ಕಿಡಿಗೇಡಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಜಾಹಿರ್ ಎಂದು ಗುರುತಿಸಲಾಗಿದೆ.

ಬ್ಯಾನರ್ ಹರಿದು ಹಾಕಿದ ವಿಷಯ ತಿಳಿದ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು, ಸಂಸದ ಎಸ್. ಮುನಿಸ್ವಾಮಿ, ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್ ಪ್ರತಿಭಟನೆ ನಡೆಸಿದ್ದಾರೆ. ಹರಿದ ಬ್ಯಾನರ್, ಫ್ಲೆಕ್ಸ್ ಗಳನ್ನು ತೆರೆವುಗೊಳಿಸಿ ಹೊಸ ಬ್ಯಾನರ್ ಅಳವಡಿಸಲಾಗಿದೆ. ಹಿಂದೂಪರ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular