HomeKarnatakaರೈತರಿಗೆ ಸಚಿವ ಕೃಷ್ಣ ಬೈರೇಗೌಡ ಗುಡ್ ನ್ಯೂಸ್: ರಾಜ್ಯದೆಲ್ಲೆಡೆ ಪೌತಿ ಖಾತೆ ಆಂದೋಲನ

ರೈತರಿಗೆ ಸಚಿವ ಕೃಷ್ಣ ಬೈರೇಗೌಡ ಗುಡ್ ನ್ಯೂಸ್: ರಾಜ್ಯದೆಲ್ಲೆಡೆ ಪೌತಿ ಖಾತೆ ಆಂದೋಲನ

ಮೈಸೂರು: ಪೌತಿ ಖಾತೆ ಪಡೆದುಕೊಳ್ಳಲು ಸಾಧ್ಯವಾಗದೆ ಸಾಕಷ್ಟು ಜನರಿಗೆ ತೊಂದರೆಯಾಗಿದೆ. ಈ ನಿಟ್ಟಿನಲ್ಲಿ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ರಾಜ್ಯದಲ್ಲೇ ಪೌತಿ ಖಾತೆ ಆಂದೋಲನ ನಡೆಸಲು ಉದ್ದೇಶಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಪೌತಿ ಖಾತೆ ಆಂದೋಲನವನ್ನು ಪ್ರಾಯೋಗಿಕವಾಗಿ ಆರಂಭಿಸಿದ್ದು, ಇದರ ಸಾಧಕ ಬಾಧಕ ನೋಡಿಕೊಂಡು ರಾಜ್ಯದೆಲ್ಲೆಡೆ ಪೌತಿ ಖಾತೆ ಆಂದೋಲನ ವಿಸ್ತರಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಕಂದಾಯ ಇಲಾಖೆಯಲ್ಲಿ ದಾಖಲೆ ಕಳವು, ತಿದ್ದುಪಡಿ, ಮೂಲ ದಾಖಲೆ ಇಲ್ಲದಿರುವ ದೂರುಗಳು ಹೆಚ್ಚಾಗಿದೆ. ಈ ಸಮಸ್ಯೆ ಪರಿಹಾರಕ್ಕೆ ಡಿಜಟಲೀಕರಣ ಅಭಿಯಾನ ಕೈಗೊಂಡಿದ್ದು, ವರ್ಷಾಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರಿಂದ ಸಾರ್ವಜನಿಕರಿಂದ ವಸೂಲಿ, ಶೋಷಣೆ ತಪ್ಪಲಿದೆ. ಮುಂದಿನ ದಿನಗಳಲ್ಲಿ ರೆಕಾರ್ಡ್ ಸಂಪರ್ಕಿಸದೆ ಆನ್ಲೈನ್ ಮೂಲಕವೇ ದಾಖಲೆ ಪಡೆದುಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular