HomeKarnatakaಕಾಮಗಾರಿ ನಿರ್ವಹಿಸದೆ, ನಕಲಿ ಬಿಲ್ ಸೃಷ್ಟಿಸಿ ಹಣ ದುರ್ಬಳಕೆ: ಅಧಿಕಾರಿಗಳ ಅಮಾನತು

ಕಾಮಗಾರಿ ನಿರ್ವಹಿಸದೆ, ನಕಲಿ ಬಿಲ್ ಸೃಷ್ಟಿಸಿ ಹಣ ದುರ್ಬಳಕೆ: ಅಧಿಕಾರಿಗಳ ಅಮಾನತು

ಬೀದರ್: ಕಾಮಗಾರಿ ನಿರ್ವಹಿಸದೆ ನಕಲಿ ಬಿಲ್ ಸೃಷ್ಟಿಸಿ ಹಣ ದುರ್ಬಳಕೆ ಮಾಡಿಕೊಂಡಿದ್ದ ಇಬ್ಬರನ್ನು ಅಮಾನತು ಮಾಡಲಾಗಿದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಕಿರಿಯ ಇಂಜಿನಿಯರ್ ಶಿವರಾಜ್ ಪಾಟೀಲ್, ಕೌಠಾ(ಬಿ) ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಭುದಾಸ ಜಾಧವ್ ಅವರನ್ನು ಜಿಪಂ ಸಿಇಓ ಡಾ. ಗಿರೀಶ್ ದಿಲೀಪ್ ಬದೋಲೆ ಅಮಾನತು ಮಾಡಿದ್ದಾರೆ.

ಇವರಿಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಇಲಾಖೆ ಮೇಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಗ್ರಾಮದಲ್ಲಿ ಕಾಮಗಾರಿ ನಿರ್ವಹಿಸದೆ ನಕಲಿ ಬಿಲ್ ಸೃಷ್ಟಿಸಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಕಾಮಗಾರಿ ಹಣ ದುರ್ಬಳಕೆ ಹಿನ್ನಲೆಯಲ್ಲಿ ಇವರನ್ನು ಅಮಾನತು ಮಾಡಲಾಗಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular