ಥಾಣೆ : ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರ ಎಂಐಡಿಸಿ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಓರ್ವ ಉದ್ಯೋಗಿ ಸಾವನ್ನಪ್ಪಿದ್ದು, ಇತರ ಐವರು ಗಾಯಗೊಂಡಿದ್ದಾರೆ. ಥಾಣೆ ಮಹಾನಗರ ಪಾಲಿಕೆಯ ವಿಪತ್ತು ನಿರ್ವಹಣಾ ಕೋಶವು ಈ ಮಾಹಿತಿಯನ್ನು ನೀಡಿದೆ.
ಗುರುವಾರದ ಸರಣಿ ಸ್ಫೋಟಕ್ಕೆ ಸಂಬಂಧಿಸಿದಂತೆ, ಗಾಯಗೊಂಡ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಕೈಗಾರಿಕಾ ಪ್ರದೇಶದಲ್ಲಿ ಮುಂಜಾನೆ 4.30 ರ ಸುಮಾರಿಗೆ ಈ ಘಟನೆ ನಡೆದಿದೆ” ಎಂದು ಥಾಣೆ ಮುನ್ಸಿಪಲ್ ಕಾರ್ಪೊರೇಶನ್ನ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ಯಾಸಿನ್ ತಡ್ವಿ ಪಿಟಿಐಗೆ ತಿಳಿಸಿದ್ದಾರೆ.
ಕುಲ್ಗಾಂವ್-ಬದ್ಲಾಪುರ ಅಗ್ನಿಶಾಮಕ ಸೇವೆಗಳ ಮುಖ್ಯ ಅಗ್ನಿಶಾಮಕ ಅಧಿಕಾರಿ ಭಗವತ್ ಸೋನಾವಾನೆ ಅವರ ತಂಡವು ಬೆಂಕಿಯನ್ನು ನಂದಿಸಿದ್ದಾರೆ. ಕಾರ್ಖಾನೆಯು ಖಾರ್ವಾಯಿ ಎಂಐಡಿಸಿ ಪ್ರದೇಶದಲ್ಲಿದೆ,ಘಟಕದಲ್ಲಿ ಸರಣಿ ದೊಡ್ಡ ಸ್ಫೋಟಗಳು ಸಂಭವಿಸಿವೆ ಮತ್ತು ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅವರು ಹೇಳಿದರು.