ನವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ ‘ಪ್ರಾಣ ಪ್ರತಿಷ್ಟಾಪನಾ’ ಆಚರಣೆಗಳು ಮುಂದುವರೆದಿದೆ. ಜನವರಿ 22 ರಂದು ಮಧ್ಯಾಹ್ನ 12:30 ಶುಭ ಮುಹೂರ್ತದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರತಿಷ್ಠಾಪನೆ ಆಗಲಿದೆ ಎಂದು ತಿಳಿದು ಬಂದಿದೆ.
ರಾಮ್ ಲಲ್ಲಾ ವಿಗ್ರಹವನ್ನು ಬುಧವಾರ ರಾತ್ರಿ ವಿಶೇಷ ಪೂಜೆಯೊಂದಿಗೆ ಗರ್ಭಗುಡಿಗೆ ಸಾಂಪ್ರದಾಯಿಕವಾಗಿ ತರಲಾಯಿತು. ಜನವರಿ 22 ರಂದು ನಡೆಯಲಿರುವ ಪ್ರತಿಷ್ಠಾಪನಾ ಸಮಾರಂಭಕ್ಕೆ, ದೇವಾಲಯದ ಟ್ರಸ್ಟ್, ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರವು ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಅಮಿತಾಬ್ ಬಚ್ಚನ್, ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಅವರಂತಹ ಗಮನಾರ್ಹ ವ್ಯಕ್ತಿಗಳು ಸೇರಿದಂತೆ 7,000 ಕ್ಕೂ ಹೆಚ್ಚು ವ್ಯಕ್ತಿಗಳಿಗೆ ಆಹ್ವಾನ ನೀಡಲಾಗಿದೆ.