ಜಮ್ಮು ಕಾಶ್ಮೀರದಲ್ಲಿ ನೆಲಬಾಂಬ್ ಸ್ಪೋಟಗೊಂಡು ಓರ್ವ ಯೋಧ ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್ನ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ನೆಲಬಾಂಬ್ ಸ್ಫೋಟದಿಂದಾಗಿ ಓರ್ವ ಯೋಧ ಹುತಾತ್ಮರಾಗಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.
ಗಾಯಗೊಂಡ ಯೋಧರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಧಂಪುರಕ್ಕೆ ವಿಮಾನದಲ್ಲಿ ಕರೆದೊಯ್ಯಲಾಗಿದೆ. ಸ್ಫೋಟದಲ್ಲಿ ಅಗ್ನಿವೀರ್ ಯೋಧ ಹುತಾತ್ಮರಾಗಿದ್ದಾರೆ ಎಂದು ನೌಶೇರಾ ಪೊಲೀಸ್ ಠಾಣೆಯ ಉಸ್ತುವಾರಿ ಖಚಿತಪಡಿಸಿದ್ದಾರೆ.