HomeKarnatakaಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ.

ಕಾಫಿ ತೋಟದಿಂದ ವಾಪಾಸ್ ಆಗುತ್ತಿದ್ದಾಗ ಚಾಲಕನ ನಿಯಂತ್ರನ ತಪ್ಪಿದ ಕಾರು ರಸ್ತೆ ಪಕ್ಕದ ಕೆರೆಗೆ ಬಿದ್ದಿದೆ. ಕಾರಿನಲ್ಲಿದ್ದ 8 ಜನರು ಕಿಟಕಿ ಗಾಜುಗಳನ್ನು ಒಡೆದು ಹೊರಬಂದು ಪ್ರಾಣ ರಕ್ಷಿಸಿಕೊಂಡಿದ್ದಾರೆ.

ಕಾರಿನಲ್ಲಿದ್ದ ಜ್ಯೋತಿ, ಲಕ್ಷ್ಮೀ, ಮನು, ಸೀತಮ್ಮ ಸೇರಿದಂತೆ ಐವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆರೆಯ ಸುತ್ತ ತಡೆಗೋಡೆ ನಿರ್ಮಿಸದಿರುವುದೇ ಇಂತಹ ದುರಂತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಲ್ಲಳ್ಳಿ ಜಲಪಾತ, ಪುಷ್ಪಗಿರಿ ಬೆಟ್ಟಕ್ಕೆ ಇದೇ ಮಾರ್ಗವಾಗಿ ಪ್ರವಾಸಿಗರು ಸಾಗುತ್ತಾರೆ. ಕೆರೆ ಭಾಗದಲ್ಲಿ ತಡೆಗೋಡೆ ನಿರ್ಮಿಸಿದರೆ ಸಂಭವಿಸಲಿರುವ ಅಪಘಾತ ತಪ್ಪಲಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular