HomeKarnatakaಮತ್ತೆ ಏರಿಕೆ ಕಂಡ ಕೊರೋನಾ ಕೇಸ್: ಬೆಂಗಳೂರು 89 ಸೇರಿ ರಾಜ್ಯದಲ್ಲಿಂದು 149 ಜನರಿಗೆ ಸೋಂಕು...

ಮತ್ತೆ ಏರಿಕೆ ಕಂಡ ಕೊರೋನಾ ಕೇಸ್: ಬೆಂಗಳೂರು 89 ಸೇರಿ ರಾಜ್ಯದಲ್ಲಿಂದು 149 ಜನರಿಗೆ ಸೋಂಕು ದೃಢ

ಬೆಂಗಳೂರು: ಕಳೆದ ಎರಡು ದಿನಗಳಿಂದ ಕಡಿಮೆಯಾಗಿದ್ದ ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಕಂಡಿದೆ.

ರಾಜ್ಯದಲ್ಲಿ ಇಂದು 149 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 89 ಜನರಿಗೆ ಕೋರೊನಾ ಪಾಸಿಟಿವ್ ವರದಿ ಬಂದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 669 ಜನರಲ್ಲಿ ಸೋಂಕು ಸಕ್ರಿಯವಾಗಿದೆ. ಇಂದು 151 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 24 ಗಂಟೆಗಳಲ್ಲಿ 7329 ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಪಾಸಿಟಿವಿಟಿ ದರ ಶೇಕಡ 2.03 ರಷ್ಟು ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular