HomeAutoಹಳೆ ವಾಹನ ಗುಜರಿಗೆ ಹಾಕಿ ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ತೆರಿಗೆ ವಿನಾಯಿತಿ: ಸಂಪುಟ ಅನುಮೋದನೆ

ಹಳೆ ವಾಹನ ಗುಜರಿಗೆ ಹಾಕಿ ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ತೆರಿಗೆ ವಿನಾಯಿತಿ: ಸಂಪುಟ ಅನುಮೋದನೆ

ಬೆಂಗಳೂರು: ಹಳೆ ವಾಹನ ಗುಜರಿಗೆ ಹಾಕಿ ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ತೆರಿಗೆ ವಿನಾಯಿತಿ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ.

ಸ್ಕೂಟರ್ ಗೆ 5000 ರೂ.ವರೆಗೆ, ಕಾರ್ ಗೆ 50,000 ರೂ. ವರೆಗೆ ವಾಹನ ತೆರಿಗೆ ವಿನಾಯಿತಿ ನೀಡಲಿದ್ದು, ಸರಕು ವಾಹನಗಳಿಗೆ ಶೇಕಡ 10 ರಷ್ಟು ತೆರಿಗೆ ವಿನಾಯಿತಿ ನೀಡಲು ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.

ವಾಹನ ಗುಜರಿ ನೀತಿಯಂತೆ 15 ವರ್ಷ ಹಳೆಯ ವಾಹನಗಳನ್ನು ಗುಜರಿಗೆ ಹಾಕಲು ಮಾಲೀಕರಿಗೆ ಪ್ರೇರೇಪಣೆ, ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ ನೀಡಲು ನೋಂದಾಯಿತ ವಾಹನಗಳ ಸ್ಕ್ರಾಪಿಂಗ್ ಪಾಲಿಸಿ ತೆರಿಗೆ ವಿನಾಯಿತಿ ಪಟ್ಟಿ ಪರಿಷ್ಕರಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಪುಟ ಸಭೆಯ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ವಾಹನ ಸ್ಕ್ರಾಪಿಂಗ್ ಗೆ ನೀಡುವವರು ಎಲೆಕ್ಟ್ರಿಕ್ ವಾಹನ ಖರೀದಿಸಿದರೆ ದ್ವಿಚಕ್ರ ವಾಹನಕ್ಕೆ 1 ಸಾವಿರದಿಂದ 5000 ರೂ.ವರೆಗೆ, 4 ಚಕ್ರದ ವಾಹನಗಳಿಗೆ 10,000 ದಿಂದ 50,000 ರೂ.ವರೆಗೆ, ಸರಕು ಸಾಗಣೆ ವಾಹನಗಳಿಗೆ ತೆರಿಗೆ ಮೊತ್ತದ ಶೇಕಡ 10ರಷ್ಟು ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular