![](https://kannadadunia.com/wp-content/uploads/2022/01/955081-ugc-netexams.jpg)
ಬೆಂಗಳೂರು : ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ ವಾಣಿಜ್ಯ ತೆರಿಗೆ ಪರೀವೀಕ್ಷಕರ 230 ಹುದ್ದೆಗಳಿಗೆ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ 1,60,501 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ.
ರಾಜ್ಯದಲ್ಲಿ 29 ಜಿಲೆಲಗಳಲ್ಲಿನ 413 ಉಪ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಜ.20 ಮತ್ತು 21 ರಂದು ಕರ್ನಾಟಕ ಲೋಕಾಸೇವಾ ಆಯೋಗದ ವತಿಯಿಂದ ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ ವಾಣಿಜ್ಯ ತೆರಿಗೆ ಪರಿವೀಕ್ಷಕರ 230 (ಕಲ್ಯಾಣ ಕರ್ನಾಟಕ ವೃಂದ) ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದೆ.
ಜ.20 ರಂದು ಮಧ್ಯಾಹ್ನ 02 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಕನ್ನಡ ಭಾಷಾ ಪರೀಕ್ಷೆ ಮತ್ತು ಜ.21 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 11.30ರವರೆಗೆ ಸಾಮಾನ್ಯ ಜ್ಞಾನ ಪತ್ರಿಕೆ-1 ಮಧ್ಯಾಹ್ನ 02 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್ ಮತ್ತು ಕಂಪ್ಯೂಟರ್ ಜ್ಞಾನದ ಪರೀಕ್ಷೆ ನಡೆಯಲಿದೆ.
ಪರೀಕ್ಷೆಗೆ ಒಟ್ಟು1,00,320 ಪುರುಷ ಅಭ್ಯರ್ಥಿಗಳು ಮತ್ತು 60,330 ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ವಿಶೇಷ ಚೇತನರು 2,130 ಹಾಗೂ ತೃತೀಯ ಲಿಂಗಿಗಳು 31 ಜನ ಅರ್ಜಿ ಸಲ್ಲಿಸಿದ್ದಾರೆ.