![](https://kannadadunia.com/wp-content/uploads/2023/08/PM-modi.png)
ಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ವಿಮಾನದ ಮೂಲಕ ಕಲುಬರಗಿಯ ಏರ್ ಪೋರ್ಟ್ ಗೆ ಆಗಮಿಸಿದ್ದಾರೆ.
ಇಂದು ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯ ವಿಮಾನ ನಿಲ್ದಾಣಕೆಕ ಆಗಮಿಸಿದ್ದಾರೆ.
ಇಂದು ಪ್ರಧಾನಿ ಮೋದಿ ಅವರು ಕಲಬುರಗಿಯಿಂದ ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳುವರು. ಅಲ್ಲಿಂದ ಕಲಬುರಗಿಗೆ ವಾಪಸ್ ಆಗಿ ಮಧ್ಯಾಹ್ನ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 2.30 ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ಮೋದಿ ಅಲ್ಲಿಂದ ದೇವನಹಳ್ಳಿಯ ಭಟ್ಟರಮಾರನಹಳ್ಳಿ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಉದ್ಘಾಟನೆ ನೆರವೇರಿಸಲಿದ್ದಾರೆ.