ಮಂಡ್ಯ: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಮಂಡ್ಯ ಜಿಲ್ಲೆಯ 3ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಪ್ರಭಕರ್ ಭಟ ಪರ ವಕಾಲತ್ತು ವಸಿದ್ದ ಕಾಂಗ್ರೆಸ್ ನ ವಕೀಲರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಪ್ರಭಾಕರ್ ಭಟ್ ಪರ ಶ್ರೀರಂಗಪಟ್ಟಣ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಚಂದ್ರೇಗೌಡ ವಕಾಲತ್ತು ವಹಿಸಿದ್ದರು ಎಂದು ತಿಳಿದುಬಂದಿದೆ. ಇದೀಗ ಅವರನ್ನು ಹುದ್ದೆಯಿಂದ ಹಾಗೂ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಪ್ರಭಾಕರ್ ಭಟ್ ಗೆ ಜಾಮೀನು ಕೊಡಿಸಿರುವ ವಿಚಾರವಾಗಿ ವಕೀಲರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಕಾನೂನು ಘಟಕದ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಗೌರಿಶಂಕರ್, ಚಂದ್ರೇಗೌಡ ಅವರನ್ನು ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.