ಮೈಸೂರು : ಮೈಸೂರಿನಲ್ಲಿ ಘೋರ ದುರಂತ ನಡೆಸಿದ್ದು, ಕಪಿಲಾ ನದಿಯಲ್ಲಿ ಮುಳುಗಿ ಮೂವರು ಅಯ್ಯಪ್ಪ ಮಾಲಾಧಾರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ನಂಜನಗೂಡಿನ ಹೆಜ್ಜಿಗೆ ಸೇತುವೆ ಬಳಿ ಈ ಘಟನೆ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿದ್ದಾರೆ.
ಮೃತರು ತುಮಕೂರು ಮೂಲದವರು ಎಂದು ಹೇಳಲಾಗುತ್ತಿದೆ, ನದಿಗೆ ಇಳಿದ ಐವರ ಪೈಕಿ ಮೂವರು ನೀರುಪಾಲಾಗಿದ್ದು, ಇಬ್ಬರುಸೇಫ್ ಆಗಿದ್ದಾರೆ. ನದಿಯಲ್ಲಿ ಅಯ್ಯಪ್ಪ ಮಾಲೆ ತೆಗೆಯಲು ಹೋದಾಗ ಕಾಲು ಜಾರಿ ಮೂವರು ಕೊಚ್ಚಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ.