HomeKarnatakaBIG NEWS : ಕರ್ನಾಟಕಕ್ಕೆ ಮತ್ತೆ ‘ಕಾವೇರಿ’ ಶಾಕ್ : ಫೆಬ್ರವರಿಯಲ್ಲಿ ತಮಿಳುನಾಡಿಗೆ ಪ್ರತಿ ದಿನ...

BIG NEWS : ಕರ್ನಾಟಕಕ್ಕೆ ಮತ್ತೆ ‘ಕಾವೇರಿ’ ಶಾಕ್ : ಫೆಬ್ರವರಿಯಲ್ಲಿ ತಮಿಳುನಾಡಿಗೆ ಪ್ರತಿ ದಿನ 998 ಕ್ಯೂಸೆಕ್ ನೀರು ಬಿಡಲು ‘CWRC’ ಸೂಚನೆ

ನವದೆಹಲಿ : ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸಿಡಬ್ಲ್ಯುಆರ್ಸಿ ( CWRC) ಸೂಚನೆ ನೀಡಿದೆ.

ಹೌದು, ತಮಿಳುನಾಡಿಗೆ ಜನವರಿಯ ಬಾಕಿ ಉಳಿದಿರುವ ದಿನಗಳು ಹಾಗೂ ಫೆಬ್ರವರಿಯಲ್ಲಿ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಗುರುವಾರ ಆದೇಶ ನೀಡಿದೆ. ಜನವರಿಯ ಮುಂದಿನ ದಿನಗಳಲ್ಲಿ ತಮಿಳುನಾಡಿಗೆ ಪ್ರತಿ ದಿನ 1,182 ಕ್ಯೂಸೆಕ್ ಹಾಗೂ ಫೆಬ್ರವರಿ ತಿಂಗಳಲ್ಲಿ ಪ್ರತಿ ದಿನ 998 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸಿಡಬ್ಲ್ಯುಆರ್ಸಿ ಸೂಚನೆ ನೀಡಿದೆ.

ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯದ ಪರ ಅಧಿಕಾರಿಗಳು ವಾದ ಮಂಡಿಸಿದ್ದರು. ಕರ್ನಾಟಕ, ಕಾವೇರಿ ಜಲಾನಯನ ಪ್ರದೇಶದ ಎಲ್ಲ ನಾಲ್ಕು ಜಲಾಶಯಗಳಲ್ಲಿ ಕೂಡ ಶೇ 52ರಷ್ಟು ಸಂಗ್ರಹ ಕೊರತೆ ಇದೆ ಎಂದು ತಿಳಿಸಿತು. ಆದರೂ ರಾಜ್ಯಕ್ಕೆ ಹಿನ್ನಡೆಯಾಗಿದ್ದು, ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular