HomeKarnatakaBIG NEWS: ಕುಟುಂಬ ಸಮೇತವಾಗಿ ನಾನೂ ಅಯೋಧ್ಯೆಗೆ ಹೋಗುತ್ತೇನೆ; ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

BIG NEWS: ಕುಟುಂಬ ಸಮೇತವಾಗಿ ನಾನೂ ಅಯೋಧ್ಯೆಗೆ ಹೋಗುತ್ತೇನೆ; ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಹಾಸನ: ನಾನೂ ಅಯೋಧ್ಯೆ ರಾಮ ಮಂದಿರಕ್ಕೆ ಹೋಗುತೇನೆ. ಕುಟುಂಬ ಸಮೇತರಾಗಿ ನಾವು ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗುತ್ತೇವೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ, ನಾನು, ನನ್ನ ಪತ್ನಿ, ಕುಮರಸ್ವಾಮಿ, ಅನಿತಾ ಹಾಗೂ ನಿಖಿಲ್ ನಾವೆಲ್ಲರೂ ಜನ.22ರಂದು ಅಯೋಧ್ಯೆಗೆ ಹೋಗುತ್ತೇವೆ. ವಿಶೇಷ ವಿಮಾನ ಮಾಡಿದ್ದಾರೆ. ಅದರಲ್ಲಿಯೇ ತೆರಳುವುದಾಗಿ ತಿಳಿಸಿದರು.

ಇದೇ ವೇಳೆ ರಾಜ್ಯ ಸರ್ಕಾರ ಒಳ ಮೀಸಲಾತಿ ಬಗ್ಗೆ ಸಚಿವ ಸಂಪುಟ ಸಭೆಯ ನಿರ್ಣಯಲ್ಲಿ ನಿರ್ಣಯಿಸಿ ಕೇಂದ್ರಕ್ಕೆ ಕಳುಹಿಸಿದೆ. ಒಕ್ಕಲಿಗರಿಗೆ ಕೊಟ್ಟಿದ್ದ ಮೀಸಲಾತಿ ಕೋಟಾ ಕಡಿಮೆ ಮಾಡಿ ಮುಸ್ಲಿಂರಿಗೆ ಕೊಟ್ಟಿದ್ದು ನಾನು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular