HomeKarnatakaBIG NEWS: ಬೆಂಗಳೂರು ಏರ್ ಪೋರ್ಟ್ ನಲ್ಲಿ 26 ಕೋಟಿ ರೂ.ಮೌಲ್ಯದ ಕೊಕೇನ್ ಜಪ್ತಿ; ಆರೋಪಿ...

BIG NEWS: ಬೆಂಗಳೂರು ಏರ್ ಪೋರ್ಟ್ ನಲ್ಲಿ 26 ಕೋಟಿ ರೂ.ಮೌಲ್ಯದ ಕೊಕೇನ್ ಜಪ್ತಿ; ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 26 ಕೋಟಿ ಮೌಲ್ಯದ ಕೊಕೇನ್ ಜಪ್ತಿ ಮಾಡಿದ್ದಾರೆ.

ಬೆಂಗಳೂರಿನಿಂದ ದೆಹಲಿಗೆ ಅಕ್ರಮವಾಗಿ ಕೊಕೇನ್ ಸಾಗಾಟ ಮಾಡಲಾಗುತ್ತಿತ್ತು. ಕೊಕೇನ್ ಸಮೇತ ಮಹಿಳೆಯನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಪ್ರವಾಸಿ ವೀಸಾದಲ್ಲಿ ಬೆಂಗಳೂರಿಗೆ ಬಂದಿದ್ದ 36 ವರ್ಷದ ಮಹಿಳೆ ಲಗೇಜ್ ಬ್ಯಾಗ್ ನಲ್ಲಿ ಕೊಕೇನ್ ಮರೆ ಮಾಚಿ ಸಾಗಾಟ ಮಾಡುತ್ತಿದ್ದಳು. ಬೆಂಗಳೂರಿನಿಂದ ದೆಹಲಿಗೆ ತೆರಳಲು ಚೆಕ್ ಇನ್ ಆಗುತ್ತಿದ್ದ ವೇಳೆ ಮಹಿಳೆ ಸಿಕ್ಕಿಬಿದ್ದಿದ್ದಾಳೆ. 2.6 ಕೆಜಿ ಕೊಕೇನ್ ಜಪ್ತಿ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular