ನವದೆಹಲಿ : ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವೀಡಿಯೊ ಸೃಷ್ಟಿಸಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಶನಿವಾರ ತಿಳಿಸಿದ್ದಾರೆ.
ವೀಡಿಯೊದ ಸೃಷ್ಟಿಕರ್ತ ಎಂದು ಶಂಕಿಸಲಾದ ಆರೋಪಿಯನ್ನು ದಕ್ಷಿಣ ಭಾರತದಲ್ಲಿ ಬಂಧಿಸಿ ದೆಹಲಿಗೆ ಕರೆತರಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನವೆಂಬರ್ 10 ರಂದು ದೆಹಲಿ ಪೊಲೀಸರ ವಿಶೇಷ ಘಟಕದ ಗುಪ್ತಚರ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ (ಐಎಫ್ಎಸ್ಒ) ಘಟಕದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 465 (ಫೋರ್ಜರಿಗಾಗಿ ಶಿಕ್ಷೆ) ಮತ್ತು 469 (ಪ್ರತಿಷ್ಠೆಗೆ ಹಾನಿ ಮಾಡುವ ಉದ್ದೇಶದಿಂದ ಫೋರ್ಜರಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 ಸಿ ಮತ್ತು 66 ಇ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.