HomeEntertainmentBREAKING : ಮಹಿಳೆಗೆ ನಾಯಿ ಕಚ್ಚಿದ ಪ್ರಕರಣದಲ್ಲಿ ನಟ ದರ್ಶನ್ ಗೆ ರಿಲೀಫ್, ಚಾರ್ಜ್...

BREAKING : ಮಹಿಳೆಗೆ ನಾಯಿ ಕಚ್ಚಿದ ಪ್ರಕರಣದಲ್ಲಿ ನಟ ದರ್ಶನ್ ಗೆ ರಿಲೀಫ್, ಚಾರ್ಜ್ ಶೀಟ್ ನಲ್ಲಿ ಹೆಸರು ಕೈ ಬಿಟ್ಟ ಪೊಲೀಸರು

ಬೆಂಗಳೂರು : ಮಹಿಳೆಗೆ ನಟ ದರ್ಶನ್ ಮನೆ ನಾಯಿ ಕಚ್ಚಿದ್ದ ಪ್ರಕರಣದಲ್ಲಿ ನಟ ದರ್ಶನ್ ಗೆ ರಿಲೀಫ್ ಸಿಕ್ಕಿದೆ.

ಪ್ರಕರಣದ ಚಾರ್ಜ್ ಶೀಟ್ ನಲ್ಲಿ ಪೊಲೀಸರು ನಟ ದರ್ಶನ್ ಹೆಸರು ಕೈ ಬಿಟ್ಟಿದ್ದಾರೆ. ನಟ ದರ್ಶನ್ ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 3 ತಿಂಗಳ ನಂತರ ಪೊಲೀಸರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಈ ಪ್ರಕರಣದಲ್ಲಿ ದರ್ಶನ್ ಅವರ ಪಾತ್ರ ಇಲ್ಲದೆ ಇರುವುದು ತನಿಖೆಯಲ್ಲಿ ಗೊತ್ತಾಗಿದೆ. ಹೀಗಾಗಿ ದೋಷಾರೋಪ ಪಟ್ಟಿಯಲ್ಲಿ ದರ್ಶನ್ ಅವರ ಹೆಸರು ಸೇರಿಸದಿರಲು ಪೊಲೀಸರು ನಿರ್ಧರಿಸಿದ್ದರು.ಅಮಿತಾ ಜಿಂದಾಲ್ ಎಂಬ ಮಹಿಳೆಗೆ ದರ್ಶನ್ ಅವರ ಮನೆಯ ಸಾಕಿದ ನಾಯಿಗಳು ಕಚ್ಚಿದ್ದು, ರಾಜರಾಜೇಶ್ವರಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ದರ್ಶನ್ ಕೂಡ ವಿಚಾರಣೆಗೆ ಹಾಜರಾಗಿದ್ದರು. ಪ್ರಕರಣ ನಡೆಯುವ ಸಂದರ್ಭದಲ್ಲಿ ತಾವು ಇರಲಿಲ್ಲ. ಇನ್ನು ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುವುದಾಗಿ ಹೇಳಿದ್ದರು.ತನಿಖೆ ನಡೆಸಿದ ಪೊಲೀಸರು ಪ್ರಕರಣದಲ್ಲಿ ದರ್ಶನ್ ಅವರ ಪಾತ್ರ ಇಲ್ಲದೆ ಇರುವುದನ್ನು ಗಮನಿಸಿ ಅವರ ಹೆಸರು ಕೈಬಿಟ್ಟು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದರ್ಶನ್ ನಿವಾಸದ ಬಳಿ ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು. ನೋಟಿಸ್ ನೀಡಿದ ಮೂರು ದಿನಗಳೊಳಗೆ ಸಿಸಿ ಟಿವಿ ಫೂಟೇಜ್ ಸಹಿತ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು, ಅಂತೆಯೇ ಆರ್.ಆರ್.ನಗರ ಠಾಣೆಗೆ ಹಾಜರಾಗಿ ದರ್ಶನ್ ಹೇಳಿಕೆ ದಾಖಲಿಸಿದ್ದರು.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular