HomeKarnatakaರಾಜ್ಯದಲ್ಲಿ ಎಷ್ಟೊಂದು ಕಷ್ಟಗಳಿವೆ, ನಮಗೆ ಇನ್ನೊಂದು ರಾಮಮಂದಿರ ಬೇಕೆ? : ನಟ ಚೇತನ್ ಅಹಿಂಸಾ

ರಾಜ್ಯದಲ್ಲಿ ಎಷ್ಟೊಂದು ಕಷ್ಟಗಳಿವೆ, ನಮಗೆ ಇನ್ನೊಂದು ರಾಮಮಂದಿರ ಬೇಕೆ? : ನಟ ಚೇತನ್ ಅಹಿಂಸಾ

ಬೆಂಗಳೂರು : ನಮ್ಮ ರಾಜ್ಯದಲ್ಲಿ ಎಷ್ಟೊಂದು ಕಷ್ಟಗಳಿವೆ, ನಮಗೆ ಇನ್ನೊಂದು ರಾಮಮಂದಿರ ಬೇಕೆ? ಎಂದು ನಟ ಚೇತನ್ ಅಹಿಂಸಾ ಪೋಸ್ಟ್ ಮಾಡಿದ್ದಾರೆ.

ಬೆಂಗಳೂರು ಪೂರ್ವ ತಾಲೂಕಿನ ಬಿದರಹಳ್ಳಿಯಲ್ಲಿ ಶ್ರೀರಾಮ ಟ್ರಸ್ಟ್ ನಿರ್ಮಿಸಿರುವ ಸೀತಾ-ರಾಮ, ಲಕ್ಷ್ಮಣ, ಆಂಜನೇಯ ದೇವಾಲಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜನವರಿ 22ರಂದು ಉದ್ಘಾಟಿಸಲಿದ್ದಾರೆ. ಸೀತಾ-ರಾಮ ಲಕ್ಷ್ಮಣ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.

ಈ ವಿಚಾರದ ಕುರಿತು ಸೋಶಿಯಲ್ ಮೀಡಿಯಾದಲ್ಲಿ ನಟ ಚೇತನ್ ಅಹಿಂಸಾ ಪೋಸ್ಟ್ ಹಂಚಿಕೊಂಡಿದ್ದು , ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯ ದಿನವೇ (ಜನವರಿ 22) ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಒಂದು ರಾಮ ಮಂದಿರ ಉದ್ಘಾಟನೆ ಮಾಡಲಿದ್ದಾರೆ. ಈ ರಾಮ ದೇವಾಲಯವು 33 ಅಡಿ ಆಂಜನೇಯನ ಮೂರ್ತಿಯನ್ನು ಹೊಂದಿದೆ,    ಇದೇನಾ ನಮ್ಮ ಸಂವಿಧಾನ ಮತ್ತು ಬಸವಣ್ಣ ನಿಮಗೆ ಕಲಿಸಿದ್ದು ಸಿಎಂ ಸಿದ್ದರಾಮಯ್ಯ? ನಮ್ಮ ರಾಜ್ಯದಲ್ಲಿ ಎಷ್ಟೊಂದು ಕಷ್ಟಗಳಿವೆ– ನಮಗೆ ಇನ್ನೊಂದು ರಾಮಮಂದಿರ ಬೇಕೆ? ಸಿಎಂ ಸಿದ್ದರಾಮಯ್ಯ ಅವರಿಂದ ಮತ್ತೆ ನಿರಾಸೆಯಾಗಿದೆ ಎಂದು ಎಂದು ನಟ ಚೇತನ್ ಅಹಿಂಸಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾನೆ ಕಾರ್ಯಕ್ರಮ ನಡೆಯಲಿದೆ. ಇದೇ ದಿನದಂದು ಸಿಎಂ ಸಿದ್ದರಾಮಯ್ಯ ಕೂಡ ಬೆಂಗಳೂರಿನಲ್ಲಿ ರಾಮ ಮಂದಿರ ಉದ್ಘಾಟಿಸಲಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular