![](https://kannadadunia.com/wp-content/uploads/2022/01/07-1444194258-teacher345-22.jpg)
ಬೆಂಗಳೂರು : 2023-24ನೇ ಸಾಲಿಗೆ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
ಈ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, 2023-24ನೇ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ (Specified Post) ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡುವ ಬಗ್ಗೆ ಉಲ್ಲೇಖಿತ ಪತ್ರದಲ್ಲಿ ಅಧಿಸೂಚನೆ ಮತ್ತು ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು.
ಅದರಂತೆ ಶಿಕ್ಷಕರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದು, ಸಲ್ಲಿಸಿರುವ ಅರ್ಜಿಯಲ್ಲಿ ನ್ಯೂನತೆಗಳಿದ್ದು ಅಂತಹವರು ಅರ್ಜಿಯನ್ನು ತಿದ್ದುಪಡಿ ಮಾಡಲು ಹಾಗೂ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡುವಂತೆ ಕೆಲವು ಶಿಕ್ಷಕರು ಕೋರಿರುತ್ತಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ಮನವಿ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಕಾಲಾವಕಾಶವನ್ನು ವಿಸ್ತರಿಸಿ ನಿರ್ಧಿಷ್ಟಪಡಿಸಿದ ಹುದ್ದೆಗಳಿಗೆ ದಿನಾಂಕ: 23/02/2024ರವರೆಗೆ ಆನ್ಲೈನ್ ಮೂಲಕ ಹೊಸದಾಗಿ ಅರ್ಜಿ ಸಲ್ಲಿಸಲು ಹಾಗೂ ತಿದ್ದುಪಡಿ ಮಾಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದರಿಂದಾಗಿ ನಿಗಧಿಪಡಿಸಿದ ವೇಳಾಪಟ್ಟಿಯಲ್ಲಿ ಬದಲಾವಣೆಯಾಗುತ್ತಿದ್ದು ನಂತರದಲ್ಲಿ ವಿಸ್ತ್ರತವಾದ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದೆ.