![](https://kannadadunia.com/wp-content/uploads/2024/01/Law-University.jpg)
ಬೆಂಗಳೂರು : ರಾಜ್ಯದ ಕಾನೂನು ವಿಶ್ವವಿದ್ಯಾಲಯಕ್ಕೆ ಬೋಧಕರು ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಕಾನೂನು ವಿಶ್ವವಿದ್ಯಾಲಯದಲ್ಲಿ ಕೋರ್ಸು ಸೀಟುಗಳ ಸಂಖ್ಯೆ 180 ರಿಂದ 300ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಮೂಲಸೌಲಭ್ಯಕ್ಕಾಗಿ ₹ 70 ಕೋಟಿ ಅನುದಾನ ಒದಗಿಸಲು ಅನುಮೋದನೆ ನೀಡಲಾಗಿದೆ. ಇದರಲ್ಲಿ ಆಡಳಿತ ಭವನ, ಗ್ರಂಥಾಲಯ, ಕ್ಯಾಂಟೀನ್, ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣವಾಗಲಿವೆ ಎಂದು ಹೇಳಿದ್ದಾರೆ.