HomeIndiaರಾಮ ಮಂದಿರ ಪ್ರಾಣ ಪ್ರತಿಷ್ಠೆ ಹಿನ್ನೆಲೆ ನಾಳೆ 16 ರಾಜ್ಯಗಳಲ್ಲಿ ರಜೆ ಘೋಷಣೆ: ರಾಜ್ಯದಲ್ಲಿ ಇನ್ನೂ...

ರಾಮ ಮಂದಿರ ಪ್ರಾಣ ಪ್ರತಿಷ್ಠೆ ಹಿನ್ನೆಲೆ ನಾಳೆ 16 ರಾಜ್ಯಗಳಲ್ಲಿ ರಜೆ ಘೋಷಣೆ: ರಾಜ್ಯದಲ್ಲಿ ಇನ್ನೂ ತೀರ್ಮಾನ ಇಲ್ಲ

ನವದೆಹಲಿ: ಅಯೋಧ್ಯೆ ರಾಮ ಮಂದಿರ ಶ್ರೀರಾಮಲಲ್ಲ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜನವರಿ 22ರಂದು 16 ರಾಜ್ಯಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಇನ್ನು ಯಾವುದೇ ತೀರ್ಮಾನ ಪ್ರಕಟಿಸಿಲ್ಲ.

ಉತ್ತರ ಪ್ರದೇಶ ಸೇರಿದಂತೆ ಬಿಜೆಪಿ ಆಡಳಿತ ಇರುವ ರಾಜ್ಯಗಳ ಜೊತೆಗೆ ದೆಹಲಿ, ಪುದುಚೇರಿ, ಚಂಡೀಗಢ ಕೇಂದ್ರಾಡಳಿತ ಪ್ರದೇಶಗಳು, ಒಡಿಶಾ ರಾಜ್ಯದಲ್ಲಿಯೂ ರಜೆ ಘೋಷಣೆ ಮಾಡಲಾಗಿದೆ. ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರಿಸ್ ಸೇರಿದಂತೆ ಹಲವು ಖಾಸಗಿ ಕಂಪನಿಗಳು ಕೂಡ ರಜೆ ಘೋಷಣೆ ಮಾಡಿವೆ.

ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು, ಕೇಂದ್ರ ಸರಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ನೀಡಲಾಗಿದ್ದು, ಷೇರುಪೇಟೆಗೂ ರಜೆ ಇರಲಿದೆ. ಕರ್ನಾಟಕದಲ್ಲಿ ರಜೆ ಘೋಷಣೆ ಮಾಡಬೇಕೆಂದು ಬಿಜೆಪಿ ನಾಯಕರು ಹಾಗೂ ವಿವಿಧ ಸಂಘಟನೆಗಳು ಮನವಿ ಮಾಡಿದ್ದರೂ ಸರ್ಕಾರ ಇನ್ನು ಯಾವುದೇ ತೀರ್ಮಾನ ಕೈಗೊಂಡಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular