HomeKarnatakaಶಿಕ್ಷಕರ ಕ್ಷೇತ್ರ ಉಪಚುನಾವಣೆ ಮತದಾರರಿಗೆ ಬಲಗೈ ಮಧ್ಯದ ಬೆರಳಿಗೆ ಅಳಿಸಲಾಗದ ಶಾಯಿ

ಶಿಕ್ಷಕರ ಕ್ಷೇತ್ರ ಉಪಚುನಾವಣೆ ಮತದಾರರಿಗೆ ಬಲಗೈ ಮಧ್ಯದ ಬೆರಳಿಗೆ ಅಳಿಸಲಾಗದ ಶಾಯಿ

ಬೆಂಗಳೂರು: ಪುಟ್ಟಣ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಸಿದ್ಧತೆ ಕೈಗೊಳ್ಳಲಾಗಿದೆ.

ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಉಪಚುನಾವಣೆ ನಡೆಯಲಿದ್ದು, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮತ್ತು ಬಿಬಿಎಂಪಿ ವತಿಯಿಂದ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಫೆಬ್ರವರಿ 16ರಂದು ಮತದಾನ ನಡೆಯಲಿದ್ದು, ಮತದಾರರಿಗೆ ಬಲಗೈ ಮಧ್ಯದ ಬೆರಳಿಗೆ ಅಳಿಸಲಾಗದ ಶಾಯಿ ಹಚ್ಚಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮತಗಟ್ಟೆಗಳು, ಮತಯಂತ್ರಗಳು ಸೇರಿ ಇತರೆ ಸಿದ್ಧತೆ, ಶಾಂತಿಯುತ ಚುನಾವಣೆಗೆ ಕ್ರಮ ಕೈಗೊಂಡಿದ್ದು, ಫೆಬ್ರವರಿ 23ರವರೆಗೂ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಚುನಾವಣೆಗೆ ಸಂಬಂಧಿಸಿದ ದೂರು ಕುಂದು ಕೊರತೆಗಳ ಮಾಹಿತಿಗಾಗಿ ಮತದಾರರು ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ 24 ಗಂಟೆಯೂ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ, ದೂರು ನಿವಾರಣಾ ಕೇಂದ್ರ ಸ್ಥಾಪಿಸಲಾಗಿದೆ. 080 22211106, ಇ-ಮೇಲ್ [email protected] ಮೂಲಕ ದೂರು ಸಲ್ಲಿಸಬಹುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular