ಮೈಸೂರು: ನಾಳೆ ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯಾಗಲಿದ್ದು, ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಜನರು ಕಾಯುತ್ತಿದ್ದಾರೆ. ಈ ನಡುವೆ ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ವೇಳೆ ವಿವಿಧ ರಾಜ್ಯಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆದರೆ ಶೋಭಾಯಾತ್ರೆ, ಲಕ್ಷ ದೀಪೋತ್ಸವದಂತಹ ಕಾರ್ಯಕ್ರಮಕ್ಕೆ ಕೊನೇ ಕ್ಷಣದಲ್ಲಿ ಅನುಮತಿ ನಿರಾಕರಿಸಲಾಗಿದೆ.
ಮೈಸೂರಿನ ಅಶೋಕ ರಸ್ತೆಯಲ್ಲಿ ಲಕ್ಷ ದೀಪೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆರಂಭದಲ್ಲಿ ಅನುಮತಿ ನೀಡಿದ್ದ ಪೊಲೀಸರು ಇದೀಗ ಕೊನೇ ಕ್ಷಣದಲ್ಲಿ ಅನುಮತು ನಿರಾಕರಿಸಿದ್ದಾರೆ.
ಲಕ್ಷ ದೀಪೋತ್ಸವಕ್ಕೆ ಪೊಲೀಸ್ ಅನುಮತಿ ನಿರಾಕರಿಸಿದ್ದು, ಇದೀಗ ಹಲವು ಅನುಮಾನಕ್ಕೆ ಕಾರಣವಾಗಿದೆ. ಹೆಚ್ಚು ವಾಹನ ಸಂಚಾರ, ಜನದಟ್ಟಣೆಯುಂತಾಗುವ ಕಾರಣ ನೀಡಿ ಲಕ್ಷ ದೀಪೋತ್ಸವಕ್ಕೆ ಅನುಮತಿ ನಿರಾಕರಿಸಲಾಗಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ.